Greater Bengaluru News9 :- ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್ ಮಾಜಿ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಗೆ ಸೈಬರ್ ವಂಚಕರು ಯಾಮಾರಿಸಲು ಯತ್ನಿಸಿ ವಿಫಲವಾಗಿದ್ದಾರೆ. ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಅಂತ ಹೇಳಿ ವಂಚನೆ ಯತ್ನ ಮಾಡಿದ್ದಾರೆ.
ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಅಂತ ವಂಚನೆ ಯತ್ನಿಸಲಾಗಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದ. ಬಳಿಕ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ ಎಂದಿದ್ದ
ಹಾಗಾಗಿ ವ್ಯೆಯಕ್ತಿಕ ಮಾಹಿತಿ ನೀಡಿ ಅಂತಾ ಮಾಹಿತಿ ಕೇಳಿದ್ದ. ಅಲ್ಲದೇ ನಿಮ್ಮ ನಂಬರ್ನಿಂದ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದ.
ಈ ವೇಳೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆದ ಬಂದಿದ್ದ ನಂಬರ್ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ್ದರು. ಈ ವೇಳೆ ಟ್ರೂಕಾಲರ್ನಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ಅವರು ಸೈಬರ್ ವಂಚಕರ ಟ್ರ್ಯಾಪ್ಗೆ ಒಳಗಾಗದೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ವಂಚಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.


