ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ದೃಶ್ಯವನ್ನ ಕಣ್ತುಂಬಿಕೊಳ್ಳಿ. ದುಷ್ಟಶಕ್ತಿ ಮೇಲೆ ಶಿಷ್ಟಶಕ್ತಿಯ ವಿಜಯದ ಸಂಕೇತವಾಗಿ ಆಚರಿಸುವ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಅರಮನೆ ಆವರಣ ಸಜ್ಜಾಗಿದೆ. ಇಂದು (ಗುರುವಾರ) ಮಧ್ಯಾಹ್ನ ಮಧ್ಯಾಹ್ನ 1ರಿಂದ 1.18ರ ಶುಭ ಧನುರ್ ಲಗ್ನದ ಶುಭ ಮುಹೂರ್ತದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಮೆರವಣಿಗೆಯಲ್ಲಿ ನಿಶಾನೆ ಆನೆಗಳು, ನೌಪತ್ ಹಾಗೂ ಸಾಲಾನೆಗಳ ಜೊತೆಗೆ 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ. ಮೈಸೂರು ದಸರಾ ಎಷ್ಟೊಂದು ಸುಂದರಾ… ಎಂಬುದನ್ನ ಕುಳಿತಲ್ಲೇ ಕಣ್ತುಂಬಿಕೊಳ್ಳಲು ‘ಮೈಸೂರು ದಸರಾ ಜಂಬೂ ಸವಾರಿ 2025’ ಶೀರ್ಷಿಕೆಯಡಿ ಜಿಲ್ಲಾಡಳಿತವೇ ‘ಮೈಸೂರು ವಾರ್ತೆ’ ಯೂಟೂಬ್ ಚಾನಲ್ನಲ್ಲಿ ನೇರಪ್ರಸಾರ ಮಾಡುತ್ತಿದೆ. ನೇರ ಪ್ರಸಾರ ಇಲ್ಲಿದೆ..


