BBMP
Loading ...

HD Devegowda

Greater Bengaluru News9 : ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್‌ಡಿ ದೇವೇಗೌಡರ ವಯಸ್ಸು 92 ಆಗಿದ್ರೂ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿಯೂ ದೇವೇಗೌಡರು ಭಾಗಿಯಾಗುತ್ತಾರೆ. ಲೋಕಸಭಾ ಚುನಾವಣೆ ಮತ್ತು ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿಯೂ ದೇವೇಗೌಡರು ಪ್ರಚಾರ ನಡೆಸಿದ್ದರು.

ಕಳೆದ ವರ್ಷ ಅಷ್ಟೇ ಅಂದ್ರೆ 2024ರ ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯವಾಗಿ ಡಿಸ್ಚಾರ್ಜ್ ಆಗಿದ್ದರು.

Leave a Reply

Your email address will not be published. Required fields are marked *