BBMP
Loading ...

HD Devegowda

Greater Bengaluru News9 : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್‌ನಿಂದ ಅಕ್ಟೋಬರ್ 6ರಂದು ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಈಗ ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡಿದ್ದು, ಮುಂದೆ ಕೆಲವು ದಿನಗಳು ಮನೆಯಲ್ಲಿ ಪಡೆಯಲಿದ್ದಾರೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದಾರೆ. ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದರು.

ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡ ಆರೋಗ್ಯ ವಿಚಾರಿಸಿದ್ದರು. ದೇವೇಗೌಡರು ಚೇತರಿಸಿಕೊಳ್ಳುತ್ತಿದ್ದು ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಅಕ್ಟೋಬರ್ 10 ರಂದು ತಿಳಿಸಿದ್ದರು.

Leave a Reply

Your email address will not be published. Required fields are marked *