BBMP
Loading ...

Nanjavadhuta Shree

Greater Bengaluru News9 : ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ದೇವೇಗೌಡರು ಇಂದು ಡಿಸ್ಚಾರ್ಜ್​ ಆಗಿದ್ದು, ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ, ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇಂದು (ಅ. 13) ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ನಂಜಾವಧೂತ ಶ್ರೀಗಳು ಕೆಲ ಸಮಯದವರೆಗೆ ಹೆಚ್.ಡಿ. ದೇವೇಗೌಡರ ಜೊತೆ ಮಾತನಾಡಿ, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಅವರಿಗೆ ಆಶೀರ್ವಾದಿಸಿದರು.

ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್‌ ಕಾರಣದಿಂದಾಗಿ ಅಕ್ಟೋಬರ್ 6ರಂದು ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಈಗ ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡಿದ್ದು, ಮುಂದೆ ಕೆಲವು ದಿನಗಳು ಮನೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದಾರೆ. ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದರು.

ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡ ಆರೋಗ್ಯ ವಿಚಾರಿಸಿದ್ದರು. ದೇವೇಗೌಡರು ಚೇತರಿಸಿಕೊಳ್ಳುತ್ತಿದ್ದು ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಅಕ್ಟೋಬರ್ 10 ರಂದು ತಿಳಿಸಿದ್ದರು.

Leave a Reply

Your email address will not be published. Required fields are marked *