Greater Bengaluru News : ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಪಿಡಿಓ ಪ್ರವೀಣ್ ಕುಮಾರ್ ಆರ್ ಎಸ್ ಎಸ್ ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಪಿಡಿಓ ಪ್ರವೀಣ್ ಕುಮಾರ್ ಅಮಾತುಗೊಳಿಸಿ ಆದೇಶಿಸಿದೆ.


