Greater Bengaluru News9 : ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ.
ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in , www.hescom.co.in, www.gescomglb.org, www.mescom.org.in ಮತ್ತು .cescmysore.in ಪೋರ್ಟಲ್ ಗಳ ಮೂಲಕ ಮಾಡುವ ಆನ್ ಲೈನ್ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯವಿರುವುದಿಲ್ಲ .
ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಅಲಭ್ಯ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವ್ಯತ್ಯಯ ?
ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ.
ಸೆಸ್ಕ್ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.
ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಸುರಪುರ, ಸಿರಗುಪ್ಪ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಶಿರಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಯಪುರ ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ.


