BBMP
Loading ...

OC CC

ಬೆಂಗಳೂರು: ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ 190(2-A)ರ ಅವಕಾಶದಡಿ ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ(ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ) 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate) ಪಡೆಯುವುದರಿಂದ ವಿನಾಯಿತಿ ನೀಡಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್​ ಗುತ್ತಿಗೆದಾರರ ಸಂಘ ವಿನಂತಿ ಮಾಡಿಕೊಂಡಿದೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ: 11-07-2025 ರಂದು ನಡೆದ ಸಭೆಯ ತೀರ್ಮಾನದಂತೆ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಾನಗೊಂಡ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆ ಮುಂತಾದವುಗಳನ್ನು ಒಳಗೊಂಡಿರುತ್ತದೆ. ಇದರಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಹೆಚ್ಚಿನ ಕೆಲಸದ ಹೊರೆ ಉಂಟಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಸಾರ್ವಜನಿಕ ಅನುಕೂಲವನ್ನು ಗಮನದಲ್ಲಿರಿಸಿಕೊಂಡು, ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದರಿಂದ ವಿನಾಯಿತಿ ನೀಡಲು ಪರಿಗಣಿಸುವುದು ಸೂಕ್ತವೆಂದು ಅಭಿಪ್ರಾಯಿಸುತ್ತಾ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಕ್ಕಿರುವ ಅಧಿಕಾರದಂತೆ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy certificate) ಪಡೆಯುವುದರಿಂದ, ವಿನಾಯಿತಿ ನೀಡಲು ಅಧಿಸೂಚನೆ ಹೊರಡಿಸಲು ಕೋರಲಾಗಿತ್ತು.

ರಾಜ್ಯದ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ) ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರಿಗೆ ವಿನಾಯಿತಿ ನೀಡುವುದರಿಂದ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂಬುದನ್ನು ಮನಗಂಡು ಸಚಿವ ಸಂಪುಟವು ಪ್ರಕರಣ ಸಂಖ್ಯೆ: ಸಿ:858/2025, ದಿನಾಂಕ:16.10.2025ರಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 190(2-A)ರಡಿ ಸರ್ಕಾರಕ್ಕಿರುವ ಅಧಿಕಾರದಂತೆ, 1200 ಚ. ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ, ನಿರ್ಮಿಸಿರುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate) ಪಡೆಯುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟವು ತೀರ್ಮಾನಿಸಿತು.

ಅದರಂತೆ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ 190(2-A)ರಡಿ ಸರ್ಕಾರಕ್ಕಿರುವ ಅಧಿಕಾರದಂತೆ ರಾಜ್ಯದ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ), 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ(Occupancy Certificate) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.

Leave a Reply

Your email address will not be published. Required fields are marked *