BBMP
Loading ...

Vidhanasoudha

Greater Bengaluru News9 : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಹೊಸ ಸೌಲಭ್ಯ ನೀಡಿದ್ದು, ಸ್ವತ್ತು ನಮೂನೆ ವಿತರಿಸುವ ನಿಗದಿತ ಅವಧಿಯನ್ನು 45 ದಿನದಿಂದ 15 ದಿನಕ್ಕೆ ಕಡಿತಗೊಳಿಸಲಾಗಿದೆ. ಈ ಕ್ರಮದೊಂದಿಗೆ ಗ್ರಾಮೀಣ ಜನರಿಗೆ ತಮ್ಮ ಆಸ್ತಿಗಳ ವಿವರಗಳನ್ನು ಪಡೆಯಲು ಸುಲಭವಾಗುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ತಿದ್ದುಪಡಿ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ NOC, ಪರವಾನಗಿ, ತೆರಿಗೆ, ಶುಲ್ಕ ಮತ್ತು ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ನೀಡಲಾಗುವುದು. ಈ ಮೂಲಕ 95,75,935 ಆಸ್ತಿಗಳಿಗೆ ಪ್ರಮಾಣ ಪತ್ರ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.

ಹೊಸ ನಿಯಮಗಳಲ್ಲಿ:

  • ತೆರಿಗೆ ಲೆಕ್ಕಾಚಾರ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ.
  • ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದರೆ ಸ್ವಯಂಚಾಲಿತ ಅನುಮೋದನೆ ಪ್ರಕ್ರಿಯೆಗೆ ಅವಕಾಶ ನೀಡಲಾಗಿದೆ.
  • ಗ್ರಾಮೀಣ ಆಸ್ತಿಗಳ ಕರಡು ಪ್ರತಿಗಳನ್ನು ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ಒದಗಿಸಿ, ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ, ಗ್ರಾಮ ಪಂಚಾಯತ್ ವ್ಯವಸ್ಥೆಯ ಬಲವರ್ಧನೆಗಾಗಿ ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರ ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸುವುದು ಘೋಷಿಸಲಾಗಿತ್ತು.

ಈ ಹಂತದಲ್ಲಿ, ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಪಾವತಿಸಿ, ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ಧಿಸುವ ಮೂಲಕ ಗ್ರಾಮೀಣ ಅಭಿವೃದ್ಧಿ ಕಾರ್ಯಗಳಲ್ಲಿ ಸಹಕರಿಸಬಹುದಾಗಿದೆ. ಈ ಕ್ರಮದಿಂದ ರಾಜ್ಯಾದ್ಯಂತ ಗ್ರಾಮೀಣ ಜನತೆಗೆ ಆಸ್ತಿ ಪಟ್ಟಿ ಪ್ರಮಾಣಿತ, ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಒದಗಿಸುವ ಸಾಧ್ಯತೆ ಹೆಚ್ಚಾಗಿದೆ.

Leave a Reply

Your email address will not be published. Required fields are marked *