Greater Bengaluru News9 : 2026ರ ಸಾರ್ವತ್ರಿಕ ರಜೆ ಪಟ್ಟಿಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ಹಬ್ಬಗಳು, ನಾಡ ಹಬ್ಬ ಸೇರಿದಂತೆ ಮುಂದಿನ ವರ್ಷ ಒಟ್ಟು 20 ದಿನಗಳು ಸರ್ಕಾರಿ ರಜೆ ಇರಲಿದೆ.
ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವತ್ರಿಕ ರಜೆ ಪಟ್ಟಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಂದಿನ ವರ್ಷ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಶಾಲೆಗಳಿಗೆ, ಸಂಸ್ಥೆಗಳಿಗೆ ಈ ರಜೆಗಳು ಅನ್ವಯವಾಗಲಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ರಜೆ ಇರಲಿದೆ.
ಭಾನುವಾರ ಬರುವ ಹಬ್ಬಗಳು ರಜೆ ಪಟ್ಟಿಯಲ್ಲಿ ಇಲ್ಲ
ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (ಫೆಬ್ರವರಿ 15), ಮಹರ್ಷಿ ವಾಲ್ಮೀಕಿ ಜಯಂತಿ (ಅಕ್ಟೋಬರ್ 25), ಕನ್ನಡ ರಾಜ್ಯೋತ್ಸವ (ನವೆಂಬರ್ 1) ಹಾಗೂ ನರಕ ಚತುರ್ದಶಿ (ನವೆಂಬರ್ 8) ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (ಅಕ್ಟೋಬರ್ 10) ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.

ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು. (ನವೆಂಬರ್ 2025 ಬ್ಯಾಂಕ್ ರಜೆಗಳ ಪಟ್ಟಿ)
ಹುತ್ತರಿ ಹಬ್ಬಕ್ಕೆ ಕೊಡಗು ಜಿಲ್ಲೆಯ ರಜೆ
03.09.2026 (ಗುರುವಾರ) ಕೈಲ್ ಮೂಹೂರ್ತ, ದಿನಾಂಕ:18.10.2026 (ಭಾನುವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:26.11.2026 (ಗುರುವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
2026 ರಲ್ಲಿ ಒಟ್ಟು ಎಷ್ಟು ರಜೆಗಳು?
- ಭಾನುವಾರಗಳು – 52 ದಿನ
- 2 ನೇ ಶನಿವಾರ – 12
- 4 ನೇ ಶನಿವಾರ – 12
- ಹಬ್ಬಗಳಿಗೆ ಸರ್ಕಾರಿ ರಜೆ – 20 20 ದಿನ
ಒಟ್ಟು ರಜೆಗಳು – 96 ದಿನಗಳು


