BBMP
Loading ...

siddaramaiah-saalumarada-thimmakka-1763118735

Greater Bengaluru news9 : ವೃಕ್ಷಗಳನ್ನೇ ತಮ್ಮ ಮಕ್ಕಳನ್ನಾಗಿ ಕಂಡ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎನ್ನುವ ತಪ್ಪು ಮಾಹಿತಿಯ ಆದೇಶ ಹರಿದಾಡುತ್ತಿದೆ.

ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ನಿಧನ ಆದೇಶವನ್ನು ತಿರುಚಲಾಗಿದ್ದು, ಹರಿದಾಡುತ್ತಿರುವ ಆದೇಶಕ್ಕೆ ಸಹಿ ಮಾಡಿರುವ ಅಧಿಕಾರಿ ಸದ್ಯ ಆ ಇಲಾಖೆಯಲ್ಲಿ ಅವರು ಸೇವೆ ಸಲ್ಲಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.ಸಮಸ್ಯೆಯಿಂದಾಗಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

“ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ‌ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ” ಎಂದು ಸಿಎಂ ಮಾಧ್ಯಮ ಕಚೇರಿ ತಿಳಿಸಿದೆ.

Leave a Reply

Your email address will not be published. Required fields are marked *