BBMP
Loading ...

Screenshot-2025-11-15-170317

greater Bengaluru news9: ಬಿಹಾರ ಫಲಿತಾಂಶ ಇಡೀ‌ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ‌ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ‌.

ಹೌದು ಒಂದು ದಿನದ ಭೇಟಿಗಾಗಿ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಜನಪಥ್‌ 10ನೇ ನಂಬರ್‌ ನಿವಾಸಕ್ಕೆ ತೆರಳಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರೊಂದಿಗೆ ರಾಜ್ಯ ಸಚಿವ ಸಂಪುಟದ ಪುನರ್‌ರಚನೆ ಕುರಿತು ವಿಸ್ತೃತವಾಗಿ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.

ಸಚಿವ ಸಂಪುಟ ಪುನರ್‌ರಚನೆಗೆ ಹೈಕಮ್ಯಾಂಡ್ ಒಪ್ಪಿಗೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ. ಹೈಕಮ್ಯಾಂಡ್ ಪುನರ್‌ರಚನೆಗೆ ಸಮ್ಮತಿಸಿದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆಯುವುದಿಲ್ಲ ಎಂಬುದು ಸ್ಪಷ್ಟವಾಗಲಿದೆ. ಇದರಿಂದ ಮುಂದಿನ ಎರಡೂವರೆ ವರ್ಷಗಳಿಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲೇ ಮುಂದುವರಿಯುವ ಸಾಧ್ಯತೆ ಬಲವಾಗಿದೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಬಣವು ಯಾವುದೇ ಸಚಿವ ಸಂಪುಟ ಪುನರ್‌ರಚನೆಗೆ ವಿರೋಧ ವ್ಯಕ್ತಪಡಿಸಿದೆ. ಬದಲಾಗಿ ಸಿಎಂ ಸ್ಥಾನವನ್ನು ಸಿದ್ದರಾಮಯ್ಯರಿಂದ ತೆಗೆದು ಡಿಕೆಶಿಗೆ ನೀಡುವಂತೆ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮ್ಯಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಹೆಚ್ಚು ಕುತೂಹಲ ಮೂಡಿದೆ.

ಸಿದ್ದರಾಮಯ್ಯ ಪರವಾಗಿ ರಾಹುಲ್ ಗಾಂಧಿ ನಿಂತರೆ, ಡಿಕೆಶಿ ಪರವಾಗಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇದ್ದಾರೆ ಎನ್ನಲಾಗುತ್ತಿದೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿ, ಹೈಕಮ್ಯಾಂಡ್ ತನ್ನ ಅಂತಿಮ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಲಿದೆ.

Leave a Reply

Your email address will not be published. Required fields are marked *