BBMP
Loading ...

idu nimma Kala

Greater Bengaluru News9 : ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 19ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನವಂಬರ್ 16ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಹಲವಾರು ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಾಯಿತು.. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಎಸ್ ಕೆ ಉಮೇಶ್ , ಸಂಗೀತ ನಿರ್ದೇಶಕರು ಹಾಗೂ ಗಾಯಕರಾದ ಮಾನಸ ಹೊಳ್ಳ, ಉದಯೋನ್ಮುಖ ನಟ ಪುನೀತ್ ಕುಮಾರ್ ದೀಪ ಬೇಕಾಗುವ ಮೂಲಕ ಜೊತೆಗೆ ಕನ್ನಡಾಂಬೆಗೆ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಎಸ್ ಕೆ ಡಿ ಎಂ ಎ ಅಧ್ಯಕ್ಷರಾದ ಗಂಡಸಿ ಸದಾನಂದ ಗೌಡ ಅವರು , ಕೆಜಿಎಫ್ ಖ್ಯಾತಿಯ ಚೋಟ ರಾಖಿ ಬಾಯ್ ಅನ್ಮೋಲ್ ವಿಜಯ್ ಭಟ್ಕಲ್ , ಹಾಗೂ ಪವರ್ ಟಿವಿ ಯ ಮೂವರು ಮುಖ್ಯಸ್ಥರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಲವಾರು ಕಲಾತಂಡಗಳು ಭಾಗವಹಿಸಿದ್ದು ನೂರಾರು ಪ್ರತಿಭಾನ್ವಿತರು ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭಾ ಪ್ರದರ್ಶನವನ್ನ ನಡೆಸಿದ್ದು ವಿಶೇಷವಾಗಿತ್ತು. ಈ ಒಂದು ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿದ್ದು, ಕನ್ನಡವನ್ನ ಉಳಿಸಿ ಬೆಳೆಸುವ ಜೊತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭೆಗಳನ್ನು ಗುರುತಿಸುವ ಕೆಲಸ ನಡೆಯಲಿದೆ ಎಂದು ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಅವರು ತಿಳಿಸಿದರು.

Leave a Reply

Your email address will not be published. Required fields are marked *