BBMP
Loading ...

Traffic Fine

Greater Bengaluru news9 : ಕರ್ನಾಟಕ ಸರ್ಕಾರವು ಟ್ರಾಫಿಕ್ ದಂಡ ಪಾವತಿಗೆ ಶೇ. 50 ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಈಗಾಗಲೇ ಕೋಟಿಗಟ್ಟಲೆ ದಂಡ ಸಂಗ್ರವಾಗಿದೆ. ಹಲವಾರು ವಾಹನ ಸವಾರರು ತನ್ನ ಬಾಕಿಯಿದ್ದ ದಂಡವನ್ನೆಲ್ಲಾ ಇದೇ ಬೆಸ್ಟ್‌ ಟೈಂ ಅಂತ ಪೇ ಮಾಡ್ತಾ ಇದ್ದಾರೆ.

ಇದೀಗ ಮತ್ತೊಮ್ಮೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿಯಾಗಿರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ತೀರ್ಮಾನದಿಂದ ಲಕ್ಷಾಂತರ ವಾಹನಚಾಲಕರಿಗೆ ಖುಷಿಯ ಸುದ್ದಿ ಸಿಕ್ಕಿದಂತಾಗಿದೆ.

ಈ ಸೌಲಭ್ಯ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಾಗಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ.

ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.

ಯಾರ್ಯಾರು ಲಾಭ ಪಡೆಯಬಹುದು?

ರಾಜ್ಯದ ಯಾವುದೇ ಭಾಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ದಂಡ ಬಾಕಿ ಇಟ್ಟಿರುವ ವಾಹನಚಾಲಕರು


ಆನ್‌ಲೈನ್ (echallan), ಆಪ್ ಮೂಲಕ ಅಥವಾ RTO/ ಟ್ರಾಫಿಕ್ ಪೊಲೀಸ್ ಕಚೇರಿಯಲ್ಲಿ ಪಾವತಿಸಬಹುದಾದ ದಂಡ ಮೊತ್ತಗಳು


ಅಪರಾಧಿ ಪ್ರಕರಣಗಳಿಗೆ ಸಂಬಂಧಿಸಿದ ದಂಡಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯಿಸುವುದಿಲ್ಲ

Leave a Reply

Your email address will not be published. Required fields are marked *