BBMP
Loading ...

Screenshot-2025-11-20-143245

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಸೂಚನೆ ನೀಡಲಾಗಿದೆ. ಇದು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022, ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಅರ್ಚನಾ ಭಟ್ ಕೆ. ಅವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ನ್ಯಾಯಪೀಠ ಪರಿಶೀಲಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದ್ದಾರೆ.

ನ್ಯಾಯಪೀಠವು, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವದಲ್ಲಿ ಜಾರಿಗೆ ಬಂದಿಲ್ಲ ಎಂದು ತಿಳಿಸಿ, ಸರ್ಕಾರಕ್ಕೆ ಪ್ರಭಾವಶೀಲ ಕ್ರಮಗಳನ್ನು ತಕ್ಷಣ ತೆಗೆದುಕೊಳ್ಳುವಂತೆ ಸೂಚಿಸಿದೆ.

ಸೂಚನೆಗಳು ಮತ್ತು ಕಾಲಾವಕಾಶ:

  • ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆ ಖಚಿತಪಡಿಸಿಕೊಳ್ಳುವ ನಂತರ ರಾಜ್ಯದಲ್ಲಿ ನಿಯಮ ಜಾರಿಗೆ ತರಬೇಕು.
  • ಅಧಿಕಾರಿಗಳಿಗೆ 6 ತಿಂಗಳ ಕಾಲಾವಕಾಶ ನೀಡಲಾಗಿದೆ.
  • 9 ತಿಂಗಳಿ೦ದ 4 ವರ್ಷದೊಳಗಿನ ಮಕ್ಕಳನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್ ಸೈಕಲ್ ಸವಾರನು ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮುಂದುವರೆಸುವಂತೆ ನಿರ್ದೇಶನ ನೀಡಲಾಗಿದೆ.

ವಿಚಾರಣೆಯಲ್ಲಿ, ಸರ್ಕಾರದ ಪರ ವಕೀಲರು ಹೊಸ ಸುರಕ್ಷತಾ ಪರಿಕರಗಳು ಮಾರುಕಟ್ಟೆಗೆ ಬರುವ ಮೊದಲು ಪರೀಕ್ಷೆಗಳಿಗೆ ಬಳಗಾಗಬೇಕಾಗಿರುವುದರಿಂದ ತಯಾರಿಕೆಗೆ ಸಮಯ ಬೇಕಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಈ ಮೂಲಕ, ಮಕ್ಕಳ ಸುರಕ್ಷತೆಗಾಗಿ ಹೆಲ್ಮೆಟ್ ಬಳಕೆ ಮತ್ತು ಸುರಕ್ಷತಾ ಕ್ರಮ ಪಾಲನೆಯು ಕಡ್ಡಾಯವಾಗಲಿದೆ ಮತ್ತು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸ್ಪಷ್ಟ ಆದೇಶ ನೀಡಲಾಗಿದೆ.

Leave a Reply

Your email address will not be published. Required fields are marked *