Greater Bengaluru News9 : ರಾಜ್ಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ ಎಂದು ಕರ್ನಾಟಕ ರಾಜಕೀಯ ಬೆಳವಣಿಗೆ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೂರು ದಿನದಿಂದ ಇಲ್ಲೇ ಇದ್ದೇನೆ.
ನನಗೆ ತುಂಬಾ ಬೇಜಾರ್ ಆಗಿದೆ. ನನ್ನ ಹತ್ತಿರ ಹೇಳಲು ಏನು ಇಲ್ಲ.ಸಧ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ. ನಡೆದ ವಿದ್ಯಮಾನದ ಬಗ್ಗೆ ನನಗೆ ಹೇಳಲು ಏನೂ ಇಲ್ಲ. ದಯವಿಟ್ಟು ನೀವೂ ಇಲ್ಲಿ ಕಾಯುವುದು ಬೇಡ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ತಗೆದುಕೊಳ್ಳುತ್ತೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರಕ್ಕೆ ಎರಡುವರೆ ವರ್ಷ ತುಂಬುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಾಳಗ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣ ಸಿಡಿದೆದ್ದಿವೆ. ಎರಡು ಬಣದ ಕಡೆಯ ಶಾಸಕರು, ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಕಡೆ ಪರೇಡ್ ನಡೆಸಿದ್ದಾರೆ.


