Greater Bengaluru News9 : ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


