BBMP
Loading ...

Eggs

Greater Bengaluru News9 : ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರಬಹುದೆಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಲವರು ಜನಪ್ರಿಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ವಿಷಯವು ಮೊಟ್ಟೆ ಸೇವಿಸುವವರಲ್ಲಿ ಆತಂಕ ಮೂಡಿಸಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೇ ನೀಡಿದ್ದಾರೆ.

ಮೊಟ್ಟೆಯಲ್ಲಿ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆ್ಯಂಟಿ ಬಯೋಟೆಕ್ ಅಂಶ ಇದೆ ಎಂಬ ಬಗ್ಗೆ ಮಾಹಿತಿ ಬಂದಿತ್ತು. ಇದರ ಕುರಿತಂತೆ ಸ್ಪಷ್ಟವಾದ ವಿಚಾರ ತಿಳಿದುಕೊಳ್ಳಲು ನಮ್ಮ‌ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಏಕೆಂದರೆ ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿ ಗೊಂದಲ ಇದ್ದರೆ, ನಾವು ತಿಳಿದುಕೊಳ್ಳಬೇಕಾಗುತ್ತದೆ. ನಮ್ಮ ಇಲಾಖೆಗೆ ಹೇಳಿದ್ದೇನೆ. ಈಗಾಗಲೇ ಕಂಪನಿಯ ಮೊಟ್ಟೆ ಸ್ಯಾಂಪಲ್ ಪಡೆಯಲಾಗಿದೆ. ಟೆಸ್ಟ್ ಮಾಡಿದ ನಂತರ ಈ ವಿಚಾರವನ್ನು ತಮ್ಮ ಮುಂದೆ ಇಡುವೆ. ಸದ್ಯಕ್ಕೆ ಇದರ ಬಗ್ಗೆ ಆತಂಕ ಪಡುವುದು ಬೇಡ ಎಂದು ತಿಳಿಸಿದರು.

Leave a Reply

Your email address will not be published. Required fields are marked *