Greater Bengaluru News9 : ಬೆಸ್ಕಾಂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ವಿಜಯನಗರ, ಬಸವೇಶ್ವರ ನಗರ ಸೇರಿ 20 ಕ್ಕೂ ಅಧಿಕ ಬಡಾವಣೆಗಳಲ್ಲಿ ಬುಧವಾರ (ಡಿಸೆಂಬರ್ 24) ಬೆಳಿಗ್ಗೆಯಿಂದ ಸಂಜೆ ತನಕ ವಿದ್ಯುತ್ ಕಡಿತವಾಗಲಿದೆ.
ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದು, 24.12.2025 (ಬುಧವಾರ) ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “66/11KV ವಿಜಯನಗರ” ಸ್ಟೇಷನ್ ನಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಹಲವು ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ?
ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರೋಡ್, ಕೆ.ಹೆಚ್.ಬಿ.ಕಾಲೋನಿ, ಮಾಗಡಿ ಮೈನ್ ರೋಡ್, ಹೆಚ್.ವಿ.ಆರ್.ಲೇಔಟ್, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.


