Greater Bengaluru News9 : ಜಲಮಂಡಳಿಯು ಶುಕ್ರವಾರ (ಡಿ.26) ಬೆಳಿಗ್ಗೆ 09.30 ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಮಂಡಳಿಯ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಲು ಕೋರಲಾಗಿದೆ.


