Greater Bengaluru News9: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಆಡಳಿತಾರೂಢ ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಮಾಡಿರುವ ಟ್ವೀಟ್ ರಾಜ್ಯದ ಗಮನ ಸೆಳೆದಿದೆ.
ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26 ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಈಗ ಮಾಜಿ ಸಂಸದ ಡಿಕೆ ಸುರೇಶ್ ಮಾಡಿರುವ ಮಾರ್ಮಿಕ್ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.
ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು ಎಂಬ ಪೋಸ್ಟ್ ಮಾಡಿದ್ದಾರೆ. ಯಾವ ಅರ್ಥದಲ್ಲಿ ಈ ಪೋಸ್ಟ್ ಮಾಡಿದ್ದಾರೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.


