BBMP
Loading ...

Property

Greater Bengaluru News9 : ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಆಸ್ತಿಗಳು ಹಾಗೂ ಕೃಷಿಯೇತರ ಆಸ್ತಿಗಳಿಗೆ ನಮೂನೆ 11ಎ ಮತ್ತು ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು https://eswathu.karnataka.gov.in/ ಇ-ಸ್ವತ್ತು ತಂತ್ರಾಂಶ 2.0 ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇ-ಸ್ವತ್ತು ಪಡೆಯುವ ಪ್ರಕ್ರಿಯೆಯಲ್ಲಿ ಎದುರಾಗುವ ಎಲ್ಲಾ ಆಡಳಿತಾತ್ಮಕ ಹಾಗೂ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಇ-ಸ್ವತ್ತು ಸಹಾಯವಾಣಿ ವ್ಯವಸ್ಥೆ ಕಲ್ಪಿಸಿದೆ. ನಾಗರಿಕರು 9483476000 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.

ಈ ಮಧ್ಯೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು–2025 ಜಾರಿಯಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಕೃಷಿಯೇತರ ಭೂಮಿಗಳಿಗೆ ಇ-ಸ್ವತ್ತು ಯೋಜನೆಯಡಿ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ
ಈ ಯೋಜನೆಯ ಮೂಲಕ ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಿಸುವ ಪ್ರಕ್ರಿಯೆ ಇನ್ನಷ್ಟು ಸುಗಮಗೊಳಿಸಲಾಗಿದೆ. ಆಸ್ತಿಯ ಮಾಲೀಕರು ಅಥವಾ ಅಧಿಭೋಗದಾರರಿಗೆ ಸಂಬಂಧಿಸಿದ ದಾಖಲೆಗಳನ್ನು ಗ್ರಾಮ ಪಂಚಾಯತಿಯಿಂದ ಸುಲಭವಾಗಿ ಪಡೆಯುವ ವ್ಯವಸ್ಥೆ ರೂಪಿಸಲಾಗಿದೆ.

ಪ್ರಮುಖ ಅಂಶಗಳು
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗುತ್ತದೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ ತೆರಿಗೆ ಹಾಗೂ ಶುಲ್ಕ ವ್ಯವಸ್ಥೆ ಜಾರಿ, ಮಾಲೀಕರು ಅಥವಾ ಅಧಿಭೋಗದಾರರ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಗ್ರಾಮ ಪಂಚಾಯತಿಯಿಂದ ಒದಗಿಸಲಾಗುವುದು. ಈ ಕ್ರಮದಿಂದ ಗ್ರಾಮೀಣ ಪ್ರದೇಶದ ಆಸ್ತಿ ದಾಖಲಾತಿ ವ್ಯವಸ್ಥೆ ಪಾರದರ್ಶಕವಾಗಲಿದ್ದು, ನಾಗರಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *