BBMP
Loading ...

Mahanthesg Beelagi

Greater Bengaluru News9: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್–ಸಿ ಹುದ್ದೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಜನಸ್ನೇಹಿ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮಹಾಂತೇಶ್ ಬೀಳಗಿ ಅವರು ಇತ್ತೀಚೆಗೆ ಕಲಬುರಗಿ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.

2025ರ ನವೆಂಬರ್ 25ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಸಮೀಪ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಜೇವರ್ಗಿ ಠಾಣೆಯಲ್ಲಿ ಚಾಲಕ ಆರೋಕಿಯಾ ಆಂಥೋನಿ ರಾಜ್ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *