BBMP
Loading ...

Siddaramaiah-fb-1024x576

Greater Bengaluru News9: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು. 2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ . ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ* ಕೈಗೊಳ್ಳಲಾಗುವುದು ಎಂದರು.

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

Leave a Reply

Your email address will not be published. Required fields are marked *