Greater Bengaluru News9: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಘೋಷಿಸಿದೆ


