Greater Bengaluru News9 : ಲೋಕೋಪಯೋಗಿ ಇಲಾಖೆ (PWD)ಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಾಗೂ ಅಕೌಂಟೆಂಟ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆ ಪಿಡಬ್ಲ್ಯುಡಿ ಕಚೇರಿಯ ಕಾರ್ಯನಿರ್ವಾಹಕ ಇಂಜಿನಿಯರ್(ಎಕ್ಸಿಕ್ಯೂಟಿವ್ ಎಂಜಿನಿಯರ್) ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಹೂವಿನ ಹಡಗಲಿಯ ಮಹೇಶ್ ಹಲಗೇರಿ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದೂರುದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕಾಮಗಾರಿ ಪೂರ್ಣಗೊಳಿಸಿದ್ದರು. ಬಿಲ್ ಪಾವತಿಸಲು ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಅವರು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
1 ಲಕ್ಷ ರೂ. ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಜಯನಗರ ಲೋಕಾಯುಕ್ತ ಡಿವೈಎಸ್‌ಪಿ ಸಚಿನ್ ಎಸ್.ಛಲವಾದಿ ಅವರ ನೇತೃತ್ವದಲ್ಲಿ ಪಿಐ ರಾಜೇಶ್ ಲಮಾಣಿ, ಅಮರೇಶ್ ಹುಬ್ಬಳ್ಳಿ ಸೇರಿದಂತೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು.


