BBMP
Loading ...

Biklu

Greater Bengaluru News9 : ಕಳೆದ ವರ್ಷ ಜುಲೈ 15ರಂದು ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ. ಜಾಗ ವಿವಾದಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಹೈಕೋರ್ಟ್ ಆದೇಶದ ಬಳಿಕ ಭೈರತಿ ಬಸವರಾಜ್ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸಿಐಡಿ ತಂಡ ಬೆಂಗಳೂರು ನಗರಾದ್ಯಂತ ಶೋಧ ಕಾರ್ಯ ನಡೆಸಿದೆ. ಈ ನಡುವೆ ಶಾಸಕ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಸ್ತುತ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸುವ ಸಿದ್ಧತೆ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿಯೂ ಜಾಮೀನು ನಿರಾಕರಿಸಲ್ಪಟ್ಟಲ್ಲಿ, ಅವರು ಶರಣಾಗಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *