BBMP
Loading ...

RCB

Greater Bengal;uru News9: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಎಲ್ಲಿ ಆಡಬೇಕು ಎಂಬುದು ಕಳೆದ ಕೆಲವು ದಿನಗಳಿಂದ ಅಸ್ಪಷ್ಟವಾಗಿತ್ತು. ಇದರ ಹಿಂದೆ ಆರ್‌ಸಿಬಿ ಫ್ರಾಂಚೈಸಿ ಮತ್ತು ರಾಜ್ಯ ಸರ್ಕಾರದ ನಡುವೆ ಉಂಟಾದ ಗುದ್ದಾಟ ಕಾರಣವಾಗಿತ್ತು. ಈ ದಿನಗಳು ಅಭಿಮಾನಿಗಳಲ್ಲಿ ಕಾಳಜಿಯೇ ಹೆಚ್ಚಿಸಿದ್ದವು. ಈಗ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡು, ಸರ್ಕಾರ ಆರ್‌ಸಿಬಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಮನೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರದಿಂದ ಆರ್‌ಸಿಬಿ ಅಭಿಮಾನಿಗಳು ಉತ್ಸಾಹದಿಂದ, ಸಂತೋಷದಿಂದ ತುಂಬಿದ್ದಾರೆ. ಮುಂದಿನ ದಿನಗಳಲ್ಲಿ ಟಿಕೆಟ್‌ ಬಿಡುಗಡೆ, ಆಡಳಿತಾತ್ಮಕ ವ್ಯವಸ್ಥೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ನೀಡಲಾಗುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *