BBMP
Loading ...

Bommai

Greater Bengaluru News9 : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಹೇಮಂತ್ (20) ಮೃತ ದುರ್ಧೈವಿಯಾಗಿದ್ದು,

ಹೇಮಂತ್, ಪಿಎಸ್ ಚಂದ್ರು ಅವರ ಮಗನಾಗಿದ್ದಾರೆ, ಲೊಟ್ಟೆಗೊಲ್ಲಹಳ್ಳಿ ನಿವಾಸದಲ್ಲಿದ್ದಾಗ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಕಾರಣಗಳು ಮತ್ತು ಸಂಬಂಧಿತ ವಿಚಾರಗಳನ್ನು ಪರಿಶೀಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *