Greater Bengaluru News9 : ವಿಶ್ವವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 30ರಿಂದ ಏಪ್ರಿಲ್ 1ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 16ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ.
ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.


