Greater Bengaluru News9 : ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಹತ್ತಿರ ಬರುತ್ತಿದ್ದು, ಈ ನಡುವೆ ಜಾತ್ಯಾತೀತ ಜನತಾ ಪಕ್ಷ (ಜೆಡಿಎಸ್) ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ.
ಈಗಾಗಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್, ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಒಟ್ಟು 369 ವಾರ್ಡ್ಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.
ನಗರದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಪಕ್ಷದ ನಾಯಕ ರಮೇಶ್ ಗೌಡ ಅವರು, GBA ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಲ್ಲಿನ ಎಲ್ಲಾ 369 ವಾರ್ಡ್ಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಹೇಳಿದರು.
ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರ ಅನುಮೋದನೆಯ ನಂತರ ಪ್ರಕಟಿಸಲಾಗುತ್ತದೆ. ಪಕ್ಷದ ನಿರ್ದೇಶನದಂತೆ ಶೀಘ್ರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಬೇಕು ಎಂದು ಎಂದು ತಿಳಿಸಿದರು.
ಅಭ್ಯರ್ಥಿಗಳ ಸಂಘಟನೆ ಬಲ, ಜನಾಧಾರ ಮತ್ತು ಗೆಲುವಿನ ಸಾಧ್ಯತೆಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ, ಬೆಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜಿಸುವ ಯೋಜನೆ ಇದೆ ಎಂದು ತಿಳಿಸಿದ ಅವರು, ಪಕ್ಷದ ಕಾರ್ಯಕರ್ತರು ಸಮಾವೇಶವನ್ನು ಯಶಸ್ವಿಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.


