Greater bengaluru news9: ದೇಶದ ಪ್ರಮುಖ ನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆಯಾಗಿದೆ. ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ ಮುಂಬೈ ನಗರಗಳಲ್ಲಿ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಗಳ ಕೊರತೆಯಿಂದ ಹೋಟೇಲ್, ರೆಸ್ಟೊರೆಂಟ್ ಗಳು ಬಂದ್ ಆಗುತ್ತಿವೆ. ಹೀಗಾಗಿ ಸಮಸ್ಯೆಗೆ ಪರಿಹಾರವಾಗಿ ಕೇಂದ್ರ ಸರ್ಕಾರವು ಎಲ್ಪಿಜಿ ಸಿಲಿಂಡರ್ ಉತ್ಪಾದನೆ ಹೆಚ್ಚಿಸಲು ತೈಲ ಕಂಪನಿಗಳಿಗೆ ಆದೇಶ ನೀಡಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ಭಾರತಕ್ಕೆ ಸಮರ್ಪಕವಾಗಿ ಗ್ಯಾಸ್ ಪೂರೈಕೆಯಾಗುತ್ತಿಲ್ಲ.
ಇರಾನ್- ಅಮೆರಿಕಾದ ಯುದ್ಧದ ಕಾರಣದಿಂದಾಗಿ ಕಳೆದ ವಾರ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆ 60 ರೂಪಾಯಿ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 115 ರೂಪಾಯಿ ಏರಿಕೆಯಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಹೋಟೇಲ್ ಗಳು ಇಂದಿನಿಂದ ಬಂದ್ ಆಗಬಹುದು ಎಂದು ಹೋಟೇಲ್ ಅಸೋಸಿಯೇಷನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೇಲ್ ಮೇಲೆ ಅವಲಂಬಿತವಾಗಿರುವ ವಿದ್ಯಾರ್ಥಿಗಳು, ವೈದ್ಯರು, ಜನ ಸಾಮಾನ್ಯರಿಗೆ ತೊಂದರೆಯಾಗಬಹುದು.


