Greater bengaluru news9: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಹಿತ್ಯ ಮತ್ತು ಸಂಸ್ಕೃತಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬೆಂಗಳೂರಿನ ಶ್ರೀಮತಿ ರಮಾ ಆರ್. ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಧಾರವಾಡದ ಖಜಾನೆ ಇಲಾಖೆಯ ಶ್ರೀಮತಿ ಪರ್ವೀನ್ ಬಾನು ಬುಳ್ಳಣ್ಣವರ ರವರನ್ನು ಧಾರವಾಡದಲ್ಲಿ ಜರುಗಿದ ನೌಕರರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ರಮಾರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪರಿಷತ್ತಿನ ಎಲ್ಲಾ ಪದಾಧಿಕಾರಿ ವೃಂದದವರು ಅಭಿನಂದನೆಗಳನ್ನು ತಿಳಿಸಿ ಈ ಪರಿಷತ್ತನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದರ ಜೊತೆಗೆ ವಿವಿಧ ರಂಗಗಳಲ್ಲಿರುವ ಪ್ರತಿಭೆಗಳನ್ನು ಗುರ್ತಿಸಿ ಅಂತಹ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವುದೇ ಪರಿಷತ್ ನ ಮೂಲ ಉದ್ದೇಶವಾಗಿದೆ ಎಂದು ಧಾರವಾಡದ ಆಲೂರ ವೆಂಕಟರಾವ್ ಸಭಾಂಗಣದಲ್ಲಿ ಜರುಗಿದ ಸರ್ಕಾರಿ ನೌಕರರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಇದು ಯಾವುದೇ ನೌಕರ ಸಂಘದ ಪರ ಅಥವಾ ವಿರುದ್ಧವಾದ ಸಂಘಟನೆಯಲ್ಲ. ಎಲ್ಲರನ್ನೂ ಸಮಾನವಾಗಿ ಕೊಂಡೊಯ್ಯುವ, ಯಾವುದೇ ಒಂದು ಲಿಂಗಧಾರಿತವಲ್ಲದ, ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿದೆ ಎಂದೂ ಮಾಹಿತಿ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪರ್ವೀನ್ ಬಾನು ಬುಳ್ಳಣ್ಣವರ ಮಾತನಾಡಿ ಎಲ್ಲರಿಗೂ ಮುಕ್ತವಾದ ಅವಕಾಶ ಕಲ್ಪಿಸುವ ವೇದಿಕೆ ಇದಾಗಿದ್ದು, ನಿಮ್ಮೆಲ್ಲರ ಅಶೋತ್ತರಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುವ ಮೂಲ ಉದ್ದೇಶವನ್ನು ಹೊಂದಿವೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಮ್ಮ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲು ನಿಮ್ಮೆಲ್ಲರ ಪ್ರೋತ್ಸಾಹ – ಸಹಕಾರ ಅತ್ಯಗತ್ಯ ಎಂದು ಕೋರಿ ಆಶೀರ್ವದಿಸಿದ್ದಕ್ಕಾಗಿ ಹಾಗೂ ಶುಭ ಕೋರಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ ಎಂದರು.

ರಾಜ್ಯ ಗೌರವಧ್ಯಕ್ಷರಾದ ಎಲ್ಐ ಲಕ್ಕಮ್ಮನವರ್,ರಾಜ್ಯ ಸಹ ಕಾರ್ಯದರ್ಶಿ ಮಂಜುನಾಥ್ ಮಟ್ಟಿ. ಧಾರವಾಡ ಜಿಲ್ಲಾಧ್ಯಕ್ಷರಾದ ಬಸವರಾಜ್ ಬಾಗಲ್,ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಶ್ರೀಮತಿ ಜುಬೇದ ಬೇಗಂ,ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕುಮಾರ್ ಪಾಟೀಲ್, ಉಡುಪಿ ಜಿಲ್ಲಾಧ್ಯಕ್ಷ ಶ್ರೀಮತಿ ಉಷಾ ನಾಯಕ್, ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ಸುಮಾ ಹಡಪದ್,ಕಲ್ಬುರ್ಗಿ ಜಿಲ್ಲಾಧ್ಯಕ್ಷರಾದ ಮುರಿಗೆಪ್ಪ ಸೇರಿ ವಿವಿಧ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.


