Greater Bengaluru News9: ನಗರದ ಬ್ಯಾಟರಾಯನಪುರದಲ್ಲಿ ರೌಡಿಶೀಟರ್ರೊಬ್ಬರ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್. ವೀಡಿಯೋದಲ್ಲಿ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕುತ್ತಿರುವ ದೃಶ್ಯಗಳು ಕಾಣುತ್ತಿದೆ.
ವೀಡಿಯೋ ವೈರಲ್ ಆದ ಕೂಡಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಂಜಿತ್ ಅವರ ವಿರುದ್ಧ ರಾಜರಾಜೇಶ್ವರಿ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿವೆ, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದ್ದರೂ, ಪೊಲೀಸರು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.


