BBMP
Loading ...

1410527-powerline

Greater Bengaluru News9: ವಿದ್ಯುತ್ ಲೈನ್ ದುರಸ್ತಿ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಶಿಕಾರಿಪುರ ಪಟ್ಟಣದಲ್ಲಿ ರವಿವಾರ ನಡೆದಿದೆ.

ಹರೀಶ್ (45) ಮೃತಪಟ್ಟ ಲೈನ್ ಮ್ಯಾನ್ ಎಂದು ಗುರುತಿಸಲಾಗಿದೆ. ಇವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೆಇಬಿಯ ಸ್ಟೇಷನ್ ಎದುರು ಲೈನ್ ಸರಿ ಮಾಡುವಾಗ ಕರೆಂಟ್ ಶಾಕ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೊದಲು ಹರೀಶ್ ಅವರು ಧರ್ಮಸ್ಥಳ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳ ಹಿಂದಷ್ಟೆ ಅವರು ಶಿಕಾರಿಪುರಕ್ಕೆ ವರ್ಗಾವಣೆಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಶಿಕಾರಿಪುರ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *