Greater Bengaluru News9 : ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ನ್ಯಾ. ಸಂತೋಷ್ ಹೆಗ್ಡೆ ಅವರು ವೇದಿಕೆ ಮೇಲಿದ್ದಾಗ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ಅಸ್ವಸ್ಥಗೊಂಡ ಸಂತೋಷ್ ಹೆಗ್ಡೆ ಅವರನ್ನು ಕೂಡಲೇ ಹೈಗ್ರೌಂಡ್ಸ್ ಠಾಣೆಯ ಬಳಿ ಇರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಕೌಟ್ಸ್& ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನ್ಯಾ. ಸಂತೋಷ್ ಹೆಗ್ಡೆ ಭಾಷಣ ಮಾಡುತ್ತಿದ್ದರು. ಭಾಷಣ ಮುಕ್ತಾಯಗೊಳಿಸಿ ಕುಳಿತುಕೊಳ್ಳಬೇಕಾದರೆ ದಿಢೀರ್ ಕುಸಿದು ಬಿದ್ದರು. ತಕ್ಷಣವೇ ವೇದಿಕೆ ಮೇಲಿದ್ದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಪೀಕರ್ ಯುಟಿ ಖಾದರ್ ಅವರೂ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಂತೋಷ್ ಹೆಗ್ಡೆ ಅವರು ಅಸ್ವಸ್ಥಗೊಳುತ್ತಿದ್ದಂತೆಯೇ ಖಾದರ್ ಅವರ ಕಾರಿನಲ್ಲಿ ನಿವೃತ್ತ ಲೋಕಾಯುಕ್ತರನ್ನು ಅಸ್ಪತ್ರೆಗೆ ಕರೆದೊಯ್ಯಲಾಯಿತು.


