BBMP
Loading ...

Pawan

Greater Bengaluru News9 : ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ.

ನಂತರ ಆತ ಮನೆಗೆ ವಾಪಸ್ ಆಗಿಲ್ಲ. ಅವನ ಮೊಬೈಲ್ ಸ್ವಿಚ್ ಆಫ್ ಆಗಿರುವುದರ ಜೊತೆಗೆ ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪತ್ತೆಯಾಗಿದ್ದು, ದೇಹದ ಮೇಲೆ ಗಾಯಗಳಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಇದು ಕೊಲೆ ಆಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಪವನ್ ಸಾವಿನ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *