BBMP
Loading ...

GBA

Greater Bengaluru News9: ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದ ಹೊರಡಿಸಿತ್ತು.

ಕೋರ್ಟ್ ಆದೇಶ ಹಿನ್ನಲೆ ಚುನಾವಣೆಗೆ ಅಗತ್ಯವಿರುವ ಪ್ರಕ್ರಿಯೆಗಳನ್ನು ಸರ್ಕಾರ ಮುಗಿಸಿದ್ದು, ಚುನಾವಣೆ ನಡೆಸುವ ಬಗ್ಗೆ ಈಗ ಆಯೋಗ ನಿರ್ಧರಿಸಲಿದೆ. ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟಂಬರ್ 2020ರಲ್ಲಿ ಕೊನೆಗೊಂಡಿತ್ತು.

Leave a Reply

Your email address will not be published. Required fields are marked *