BBMP
Loading ...

Sun

Greater Bengaluru News9 : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಇನ್ನೊಂದು ವಾರ ತೀವ್ರ ಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ರಾಜ್ಯವು ಬಿಸಿಲಿನ ತಾಪಕ್ಕೆ ಬಳಲಿ ಕಂಗೆಟ್ಟಿದ್ದು, ರಣಬೇಸಿಗೆಯಿಂದ ಜನರು ಹೈರಾಣಾಗಿದ್ದಾರೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್‌ ಮೀರಿದೆ. ಬೆಂಗಳೂರಿನಲ್ಲಿ ಪ್ರಸ್ತುತ 36 ರಿಂದ 37 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

ಮುಂದಿನ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೂ ಬಿಸಿಲಿನ ತಾಪ ಇನ್ನಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.

ಹಗಲು ಮಾತ್ರವಲ್ಲದೆ, ರಾತ್ರಿ ವೇಳೆಯಲ್ಲೂ ಉಷ್ಣಾಂಶ ಹೆಚ್ಚಿರುವುದರಿಂದ ಜನರಿಗೆ ಹೆಚ್ಚಿನ ಅಸೌಕರ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *