BBMP
Loading ...

SSLC Exam

Greater Bengaluru News9 : ಹಲವು ಗೊಂದಲಗಳ ನಡುವೆಯೂ ಎಸ್​​ಎಸ್​​ಎಲ್​​ಸಿ (10ನೇ ತರಗತಿ) ಫಲಿತಾಂಶ ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ (ಏಪ್ರಿಲ್ 23) 12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಿಎಂ ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ. ಇನ್ನು ಹಿಂದಿ ವಿಷಯ ಸಂಬಂಧ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ಸಿಎಂ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ. ಈ ಸಂಬಂಧ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಸಭೆಯಲ್ಲಿ ಹೈಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ.

ಸಿಎಂ ಭೇಟಿ ಬಳಿಕ ಮಧುಬಂಗಾರಪ್ಪ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ನಾಳೆ(ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸುತ್ತೇವೆ. ಫಲಿತಾಂಶ ಪ್ರಕಟಿಸುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದ್ದು, ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ಹೇಳುತ್ತೇವೆ ಎಂದರು.

ಅಂಕ ಸುಧಾರಣೆಗೆ ಅವಕಾಶ ನೀಡಲು ಚಿಂತನೆ
ಹೈಕೋರ್ಟ್ ಆದೇಶದಂತೆ ಗ್ರೇಡ್ ಬದಲುತೃತೀಯ ಭಾಷೆಯ ವಿಷಯಕ್ಕೆ ಗ್ರೇಡ ಬದಲಾಗಿ ಅಂಕ ನೀಡಲು ನಿರ್ಧಾರವಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನೆ ನೀಡಿ ಮೌಲ್ಯಮಾಪನ ಮಾಡಲಾಗಿದೆ. ಹೀಗಾಗಿ ನಾಳೆ ಅಂಕಗಳನ್ನೇ ನೀಡಲು ಇಲಾಖೆ ಮುಂದಾಗಿದೆ. ತೃತೀಯ ಭಾಷೆಯ ಅಂಕಗಳ ಸುಧಾರಣೆಗೆ ಎರಡನೇ ಪರೀಕ್ಷೆ ಅವಕಾಶ ನೀಡಲಾಗುತ್ತಿದ್ದು, ಎರಡನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಅವಕಾಶಕ್ಕೆ ಚಿಂತನೆಗಳು ನಡೆದಿವೆ. ಇದರೊಂದಿಗೆ ಯಾವುದೇ ಶುಲ್ಕ ಇಲ್ಲದೆ ಎರಡನೇ ಪರೀಕ್ಷೆ ಅಂಕ ಸುಧಾರಣೆಗೆ ಅವಕಾಶ ನೀಡಲು ಇಲಾಖೆ ಮುಂದಾಗಿದೆ.

Leave a Reply

Your email address will not be published. Required fields are marked *