BBMP
Loading ...

Police

Greater Bengaluru News9: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 74 ಡಿವೈಎಸ್ಪಿ ಹಾಗೂ 293 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

74 ಡಿವೈಎಸ್ಪಿ ವರ್ಗಾವಣೆ
ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಪ್ರಮುಖ ಹಂತದ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯದಾದ್ಯಂತ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೇ 10, 2026 ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಡವಳಿಯಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ವರ್ಗಾವಣೆಗೊಂಡ ಅಧಿಕಾರಿಗಳು ಯಾವುದೇ ಸೇರುವಿಕೆ ಕಾಲವನ್ನು (Joining Time) ಉಪಯೋಗಿಸಿಕೊಳ್ಳದೆ ಕೂಡಲೇ ಹೊಸ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಸಂಬಂಧಪಟ್ಟ ಘಟಕಾಧಿಕಾರಿಗಳು ಈ ಅಧಿಕಾರಿಗಳನ್ನು ಬಿಡುಗಡೆಗೊಳಿಸಿ, ಅವರು ವರದಿ ಮಾಡಿಕೊಂಡ ಬಗ್ಗೆ ಪೊಲೀಸ್ ಪ್ರಧಾನ ಕಛೇರಿಗೆ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಆದೇಶವನ್ನು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರ ಪರವಾಗಿ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರು ಹೊರಡಿಸಿದ್ದಾರೆ.

293 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ
ಕರ್ನಾಟಕ ಸರ್ಕಾರವು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, 290ಕ್ಕೂ ಹೆಚ್ಚು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು (ಸಿವಿಲ್) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮೇ 10, 2026ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಈ ಆದೇಶವನ್ನು ಹೊರಡಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ಯಾವುದೇ ಸೇರುವಿಕೆ ಕಾಲಾವಕಾಶವನ್ನು (Joining Time) ಬಳಸಿಕೊಳ್ಳದೆ, ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಛೇರಿಯು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳ್ಳದ ಅಧಿಕಾರಿಗಳು ಮುಂದಿನ ಸೂಚನೆಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳಬೇಕೆಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *