BBMP
Loading ...

Priavte Bus

Greater Bengaluru News9 : ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಬೆರೆ ಏರಿಕೆ ಶಾಕ್​ ಕೊಟ್ಟಿದ್ದಾರೆ.

ಇಂದು ಬೆಳಗ್ಗೆಯಿಂದ ಪೆಟ್ರೋಲ್, ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್‌ ಪ್ರಯಾಣ ದರ ಏರಿಕೆಗೆ ತೀರ್ಮಾನಿಸಲಾಗಿದೆ.

ಶೇ.20 ರಿಂದ ಶೇ. 30ರಷ್ಟು ಟಿಕೆಟ್ ದರ ಏರಿಕೆ ಮಾಡುವ ಬಗ್ಗೆ ಖಾಸಗಿ ಬಸ್​​ ಮಾಲಕರು ಮಾಹಿತಿ ನೀಡಿದ್ದಾರೆ.

ಪ್ರತಿದಿನ ಬಸ್​​ ಒಂದಕ್ಕೆ ಕನಿಷ್ಠ 150 ಲೀಟರ್ ಡಿಸೇಲ್​​ ಹಾಕಿಸುತ್ತೇವೆ. ಇಂಧನ ಬೆಲೆಯಲ್ಲಿ 3 ರೂ. ಹೆಚ್ಚಳವಾಗಿರುವ ಕಾರಣ ನಿತ್ಯ 450 ರೂಪಾಯಿ ಹೆಚ್ಚುವರಿಯಾಗಿ ನಮಗೆ ಹೊರೆಯಾಗಲಿದೆ. ಹೀಗಾಗಿ ಟಿಕೆಟ್​ ದರ ಏರಿಸೋದು ನಮಗೂ ಅನಿವಾರ್ಯವಾಗಿದೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಉಂಟಾಗಲಿದೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ತಿಳಿಸಿದ್ದಾರೆ.

ಜನ ಸಾಮಾನ್ಯರ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್​-ಡೀಸೆಲ್​, ಚಿನ್ನ-ಬೆಳ್ಳಿ, ಅಕ್ಕಿ-ಬೆಳ್ಳಿಯಿಂದಿಡಿದು ಪ್ರತಿಯೊಂದು ವಸ್ತುವಿನ ಬೆಲೆ ಕೂಡ ಗಗನಕ್ಕೇರಿದೆ. ಇದೀಗ ಬಸ್​ ಟಿಕೆಟ್​ ದರ ಕೂಡ ಹೆಚ್ಚಿದ್ದು, ಪ್ರಯಾಣಿಕರಿಗೆ ನುಂಗಲಾರದ ತುತ್ತಾಗಿದೆ.

Leave a Reply

Your email address will not be published. Required fields are marked *