BBMP
Loading ...

Greater Bengaluru News9 : ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಒಳನಾಡು ಮತ್ತು ಕರಾವಳಿ ಭಾಗಗಳ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಧ್ಯ ಕರ್ನಾಟಕದ ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದು, ವಿಶೇಷವಾಗಿ ಬಲವಾದ ಗಾಳಿ ಹಾಗೂ ಮಳೆಯ ಸಂದರ್ಭಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

Leave a Reply

Your email address will not be published. Required fields are marked *