Greater Bengaluru News9 : ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಆಡಳಿತಾತ್ಮಕ ಕಾರಣಗಳಿಗಾಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 29 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳನ್ನು (ಪಿಎಸ್ಐ) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ನಗರ ಪೊಲೀಸ್ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ಕೂಡಲೇ ತಮ್ಮ ಪ್ರಸ್ತುತ ಕರ್ತವ್ಯದಿಂದ ಬಿಡುಗಡೆಗೊಂಡು, ನಿಯುಕ್ತಿಗೊಳಿಸಿರುವ ಹೊಸ ಸ್ಥಳಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ. ಈ ಪಟ್ಟಿಯಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ಪೊಲೀಸ್ ವಿಭಾಗ ಹಾಗೂ ಭದ್ರತಾ ವಿಭಾಗದ ಅಧಿಕಾರಿಗಳು ಸೇರಿದ್ದಾರೆ.





