Greater Bengaluru News9 : ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಾಹ್ನವಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಗ್ ಬಾಸ್ ಮೂಲಕ ಖ್ಯಾತಿಗೊಂಡಿರುವ ನಿರೂಪಕಿ ಜಾಹ್ನವಿ, ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇದೀಗ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಾಹ್ನವಿ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಸಂಭ್ರಮದಲ್ಲೇ ಜಾಹ್ನವಿ ಪಕ್ಷ ಸೇರಿಕೊಂಡಿದ್ದಾರೆ. ಮನರಂಜನಾ ಕ್ಷೇತ್ರದ ಜೊತೆಗೆ ಜಾಹ್ನವಿ ಇನ್ನು ರಾಜಕೀಯದಲ್ಲೂ ಸಕ್ರೀಯಾವಾಗಲು ನಿರ್ಧರಿಸಿದ್ದಾರೆ.
ಜಾಹ್ನವಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಲ ವಿಶೇಷತೆಗಳಿವೆ. ಕೇಂದ್ರ ಸಚಿವ, ಜೆಡಿಎಸ್ ಪ್ರಮುಖ ನಾಯಕ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಪಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಡಿ ಕುಮಾರಸ್ವಾಮಿ ಪಕ್ಷದ ಧ್ವಜ ನೀಡಿ ಸ್ವಾಗತ ಮಾಡಿದ್ದಾರೆ.
ಜಾಹ್ನವಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,ಶೈಲಜಾ ರಾವ್ ಉಪಸ್ಥಿತರಿದ್ದರು. ಇದೇ ವೇಳೆ ಜೆಡಿಎಸ್ ಮಹಿಳಾ ಘಟಕವನ್ನು ಮತ್ತಷ್ಟು ಬಲಪಡಿಸಲು ಹೆಚ್ಡಿ ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಹಿನ್ನಲೆಯಲ್ಲಿ ಪ್ರಮುಖ ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ಲಾನ್ ರೂಪಿಸಿದೆ.
ಸುದ್ದಿ ವಾಹನಿಯ ನಿರೂಪಕಿಯಾಗಿದ್ದ ಜಾಹ್ನವಿ ಬಳಿಕ ಗಿಚ್ಚಿ ಗಿಲಿ ಸೇರಿದಂತೆ ಹಲವು ಟಿವಿ ಶೋ ಗಳ ಮೂಲಕ ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಭಾರಿ ಜನಪ್ರಿಯತೆ ಗಿಟ್ಟಿಸಿಕೊಂಡರು. ಬಳಿಕ ಕೆಲ ಸಿನಿಮಾಗಳಲ್ಲೂ ಅವಕಾಶ ಪಡೆದಿದ್ದಾರೆ.


