Greater Bengaluru News9 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಖಾತೆ ಹಂಚಿಕೆ ಕಗ್ಗಂಟು ಅಂತಿಮವಾಗಿ ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಹಂಚಿಕೆಯಾದ ಪ್ರಮುಖ ಖಾತೆಗಳ ವಿವರ ಹೀಗಿದೆ:
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಣಕಾಸು ಇಲಾಖೆ, ಡಿಪಿಎಆರ್ ಹಾಗೂ ಇತರೆ ಪ್ರಮುಖ ಖಾತೆಗಳು ನೀಡಲಾಗಿದೆ. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಇಲಾಖೆ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಂಚಿಕೆಯಾಗಿದೆ.
- ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಹಾಗೂ ಐಟಿ-ಬಿಟಿ ಇಲಾಖೆ ನೀಡಲಾಗಿದೆ.
- ಕೆ.ಜೆ. ಜಾರ್ಜ್ ಅವರಿಗೆ ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ ಹಂಚಿಕೆಯಾಗಿದೆ.
- ಎಂ.ಬಿ. ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ನೀಡಲಾಗಿದೆ.
- ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ ನೀಡಲಾಗಿದೆ.
- ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಹಂಚಿಕೆಯಾಗಿದೆ.
- ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ನೀಡಲಾಗಿದೆ. ಆದರೆ, ರಾಜೀನಾಮೆ ನೀಡಿದ್ದಾರೆ.
- ಕೆ.ಹೆಚ್. ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಲಾಗಿದೆ.
- ಭೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ ಹಂಚಿಕೆಯಾಗಿದೆ.
- ಯು.ಟಿ. ಖಾದರ್ ಅವರಿಗೆ ಆರೋಗ್ಯ ಇಲಾಖೆ ನೀಡಲಾಗಿದೆ.
- ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಇಲಾಖೆ ಹಂಚಿಕೆಯಾಗಿದೆ.
- ಶರಣಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ನೀಡಲಾಗಿದೆ.
- ಈಶ್ವರ್ ಖಂಡ್ರೆ ಅವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಂಚಿಕೆಯಾಗಿದೆ.


