BBMP
Loading ...

Doctor

Greater Bengaluru News9 : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ಹಾಗೂ ಧೀscoreರ್ಘ ನಿರ್ಧಾರವೊಂದನ್ನು ಕೈಗೊಂಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಮಹತ್ತರ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಹೊಸ ಭರವಸೆ ಮೂಡಿಸಿದೆ.

200 ವೈದ್ಯರ ಖಾಯಂ ನೇಮಕಾತಿ: ರಾಜ್ಯದ ವಿವಿಧ ಕಡೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಮೊದಲ ಹಂತವಾಗಿ 200 ವೈದ್ಯರನ್ನು ಖಾಯಂ ಹಾಗೂ ನೇರ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನಿರ್ಧರಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಪರೀಕ್ಷೆ ಮುಗಿದ ಕೇವಲ ಒಂದು ವಾರದ ಒಳಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ನಿರ್ಧಾರ ಮಾಡಲಾಗಿದೆ. ಈ 200 ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಈಗಾಗಲೇ ಅಧಿಕೃತ ಅನುಮೋದನೆ ಕೂಡ ದೊರೆತಿದೆ.

ಪ್ಯಾರಾ ಮೆಡಿಕಲ್ ಸಿಬ್ಬಂದಿ ಭರ್ತಿ: ಸದ್ಯ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 1,280 ವೈದ್ಯರ ಕೊರತೆಯಿದೆ ಎಂದು ಅಂದಾಜಿಸಲಾಗಿದೆ. ವೈದ್ಯರ ಜೊತೆಗೆ ಆಸ್ಪತ್ರೆಗಳ ಸುಗಮ ನಿರ್ವಹಣೆಗೆ ಅಗತ್ಯವಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ. ಇದರ ಭಾಗವಾಗಿ 400 ನರ್ಸ್‌ಗಳು, 400 ಫಾರ್ಮಸಿಸ್ಟ್‌ಗಳು ಹಾಗೂ 400 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕವೇ ಖಾಯಂ ಆಗಿ ಭರ್ತಿ ಮಾಡಿಕೊಳ್ಳಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಗುತ್ತಿಗೆ ಆಧಾರದಲ್ಲಿ 1000 ವೈದ್ಯರ ನೇಮಕ: ತುರ್ತು ಅಗತ್ಯತೆಗಳನ್ನು ಪೂರೈಸಲು ತಕ್ಷಣವೇ ಜಾರಿಗೆ ಬರುವಂತೆ ಗುತ್ತಿಗೆ ಆಧಾರದ ಮೇಲೆ 1,000 ವೈದ್ಯರನ್ನು ನೇಮಕ ಮಾಡಿಕೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವೈದ್ಯರು ಆಯಾ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ (DHO) ನೇರವಾಗಿ ಅರ್ಜಿ ಸಲ್ಲಿಸಿ, ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಸೇವಾ ಸಾಧನೆ ಆಧಾರಿತ ಖಾಯಂ ಭರವಸೆ: ಗುತ್ತಿಗೆ ಆಧಾರದ ಮೇಲೆ ಸೇವೆಗೆ ಸೇರುವ ವೈದ್ಯರಿಗೆ ಇಲಾಖೆಯು ಮತ್ತೊಂದು ಸುವರ್ಣ ಅವಕಾಶವನ್ನು ನೀಡಿದೆ. ಗುತ್ತಿಗೆ ಅವಧಿಯಲ್ಲಿ ವೈದ್ಯರು ತೋರುವ ಸೇವಾ ಸಾಧನೆ ಮತ್ತು ಕರ್ತವ್ಯ ನಿಷ್ಠೆಯನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ಅವರನ್ನು ಖಾಯಂ ಗೊಳಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ವೈದ್ಯರ 5 ವರ್ಷಗಳ ಸುದೀರ್ಘ ಸೇವಾ ಸಾಧನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕ ಅವರ ಸೇವೆಯನ್ನು ಖಾಯಂಗೊಳಿಸುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Leave a Reply

Your email address will not be published. Required fields are marked *