BBMP
Loading ...

Bus Pass

Greater Bengaluru News9 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ.

ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಘೋಷಿಸಿದ್ದು, ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ವಾಪಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಸೌಲಭ್ಯವನ್ನು ಇದೀಗ ಗಂಡು ವಿದ್ಯಾರ್ಥಿಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ಮುಂದಿನ ಒಂದೆರಡು ದಿನಗಳಲ್ಲಿ ತಮ್ಮ ಹತ್ತಿರದ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಅರ್ಜಿ ಸಲ್ಲಿಸಬೇಕು. ಪರಿಶೀಲನೆ ಬಳಿಕ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ಬಡ–ಶ್ರೀಮಂತ ಭೇದವಿಲ್ಲದೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಆರ್ಥಿಕ ಹೊರೆ ಇಲ್ಲದೆ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *