Greatger Bengaluru News9 : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸುಮಾರು ಏಳು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ರಾಜ್ಯದ ಜನರು ಸರ್ಕಾರದಿಂದ ದೊಡ್ಡ ನಿರೀಕ್ಷೆಗಳನ್ನು ಹೊಂದಿದ್ದಾರೆ ಎಂದು ಹೇಳಿದರು. ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂಬುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ತಿಳಿಸಿದರು.
ಎಲ್ಲಾ ಇಲಾಖೆಗಳ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದ ಅವರು, ಆಡಳಿತದಲ್ಲಿ ಶಿಸ್ತು ಮತ್ತು ವೇಗ ಅಗತ್ಯವಾಗಿದೆ ಎಂದು ಹೇಳಿದರು.
“ನಾವು ಎಲ್ಲರೂ ಒಂದೇ ತಂಡ. ಕರ್ನಾಟಕದ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಮನವಿ ಮಾಡಿದರು.


