BBMP
Loading ...

Vidyut Saptaha

Greater Bengaluru News9 : ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ವತಿಯಿಂದ ಜೂನ್ 26 ರಿಂದ ಜುಲೈ 2 ರವರೆಗೆ ರಾಜ್ಯಾದ್ಯಂತ “ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2026” ಅನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 26 ರಂದು ಬೆಳಗ್ಗೆ 10:30 ಗಂಟೆಗೆ ಕಬ್ಬನ್ ಪಾರ್ಕ್‌ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಿಟೋರಿಯಂನಲ್ಲಿ ಈ ಮಹತ್ವದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಇಲಾಖೆಯ ಉಪ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಶ್ರೀ ಬಸವೇಗೌಡ ಬಿ.ಎನ್. ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ವಿಶೇಷ ಸಪ್ತಾಹದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ (IAS) ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಡಾ. ತೀತಿರಾ ಎನ್. ಅಪ್ಪಚ್ಚು ಅವರೂ ಸೇರಿದಂತೆ ಇಂಧನ ಇಲಾಖೆಯ ಉನ್ನತ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವಿದ್ಯುತ್ ಅಪಘಾತಗಳನ್ನು ತಡೆಗಟ್ಟುವ ಮತ್ತು ಸುರಕ್ಷಿತ ಬಳಕೆಯ ಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಸಪ್ತಾಹವು ಇಡೀ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ಜರುಗಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಇಂಧನ ಇಲಾಖೆ ಹಾಗೂ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ಸಿಬ್ಬಂದಿಗಳು, ಕೈಗಾರಿಕೆಗಳ ಮುಖಂಡರು, ವಿದ್ಯುತ್ ಗುತ್ತಿಗೆದಾರರು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯುತ್ ಸುರಕ್ಷತೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಸಂಬಂಧಪಟ್ಟ ವಲಯದ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಪ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಶ್ರೀ ಬಸವೇಗೌಡ ಬಿ.ಎನ್. ಅವರು ಈ ಮೂಲಕ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Leave a Reply

Your email address will not be published. Required fields are marked *